top of page
ಬಸವಣ್ಣನವರ

​ಲಿಂಗಾಯತ ಧರ್ಮದ ಸ್ಥಾಪಕರು

​ವಿಶ್ವ ಗುರು ಬಸವಣ್ಣನವರ 

Unknown Track - Unknown Artist
00:00 / 00:00
​ಬಸವಣ್ಣನವರ ವಚನ
​ಅಕ್ಕ ಮಹಾದೇವಿ ವಚನ 
​ಅಲ್ಲಮಪ್ರಭುವಚನ

ಅಕ್ಕಮಹಾದೇವಿ

ಅಯ್ಯಾ, ನೀನು ಕೇಳಿದಡೆ ಕೇಳು, ಕೇಳದಡೆ ಮಾಣು 
ಆನು ನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯಾ. 
ಅಯ್ಯಾ, ನೀನು ನೋಡಿದಡೆ ನೋಡು, ನೋಡದಡೆ ಮಾಣು 
ಆನು ನಿನ್ನ ನೋಡಿ ಹಿಗ್ಗಿ ಹಾರೈಸಿದಲ್ಲದೆ ಸೈರಿಸಲಾರೆನಯ್ಯಾ. 
ಅಯ್ಯಾ, ನೀನು ಮಚ್ಚಿದೆಡೆ ಮಚ್ಚು, ಮಚ್ಚದಡೆ ಮಾಣು 
ಆನು ನಿನ್ನನಪ್ಪಿದಲ್ಲದೆ ಸೈರಿಸಲಾರೆನಯ್ಯಾ. 
ಅಯ್ಯಾ, ನೀನು ಒಲಿದಡೆ ಒಲಿ, ಒಲಿಯದಡೆ ಮಾಣು 
ಆನು ನಿನ್ನ ಪೂಜಿಸಿದಲ್ಲದೆ ಸೈರಿಸಲಾರೆನಯ್ಯಾ. 
ಚೆನ್ನಮಲ್ಲಿಕಾರ್ಜುನಯ್ಯಾ, ಆನು ನಿಮ್ಮನರ್ಚಿಸಿ ಪೂಜಿಸಿ 
ಹರುಷದೊಳೋಲಾಡುವೆನಯ್ಯಾ. 

ಬಸವಣ್ಣ

ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾಯಿತ್ತಯ್ಯಾ,
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಮನ ಹಾಳಾಯಿತ್ತಯ್ಯಾ,
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಕರ್ಮಛೇದನವಾಯಿತ್ತಯ್ಯಾ,
ನಿಮ್ಮವರು ಅಡಿಗಡಿಗೆ ಹೇಳಿ ಭಕ್ತಿಯೆಂಬೀ ಒಡವೆಯನು
ದಿಟವ ಮಾಡಿ ತೋರಿದರು ಕಾಣಾ, ಕೂಡಲಸಂಗಮದೇವಾ.

ಅಲ್ಲಮಪ್ರಭುದೇವರು

ಬಯಲು ಬಯಲನೆ ಬಿತ್ತಿ ಬಯಲು ಬಯಲನೆ ಬೆಳೆದು
ಬಯಲು ಬಯಲಾಗಿ ಬಯಲಾಯಿತ್ತಯ್ಯಾ.
ಬಯಲ ಜೀವನ ಬಯಲ ಭಾವನೆ,ಬಯಲು ಬಯಲಾಗಿ

 ಬಯಲಾಯಿತ್ತಯ್ಯಾ.
ನಿಮ್ಮ ಪೂಜಿಸಿದವರು ಮುನ್ನವೆ

ಬಯಲಾದರು
ನಾ ನಿಮ್ಮ ನಂಬಿ ಬಯಲಾದೆ ಗುಹೇಶ್ವರಾ.

ವಚನ ಸಾಹಿತ್ಯ ೧೨ನೇ ಶತಮಾನದಲ್ಲಿ ಜಾತಿ, ಧರ್ಮ, ವರ್ಣಾಶ್ರಮದ ವಿರುದ್ದ ಬಂಡೆದ್ದು ಮಾನವ ಜಾತಿ, ಧರ್ಮ ಒಂದೇ ಸಾರಿದಲ್ಲದೆ ಅದನ್ನು ನಿಜಜೀವನದಲ್ಲಿಯೂ ಕಾರ್ಯರೂಪಕ್ಕೆ ತಂದವರು ಶಿವಶರಣರು. ಶ್ರೀ. ಬಸವಣ್ಣನವರ ನೇತೃತ್ವದಲ್ಲಿ ಆತ್ಮ ಶುದ್ಧಿ ಮತ್ತು ಕಾಯಕದ ಮಹತ್ವವನ್ನು ಜಗತ್ತಿಗೇ ತಿಳಿ ಹೇಳಿದ್ದಲ್ಲದೇ ಕಾರ್ಯರೂಪಕ್ಕೂ ತಂದವರು ಶಿವಶರಣರು. ಉಚ್ಛ ಕುಲದವರ ಸ್ವತ್ತೆಂದು ಪರಿಗಣಿಸಿದ್ದ ಸಂಸ್ಕೃತದ ಸೋಂಕಿಲ್ಲದೆ, ಪ್ರಾಸ, ಛಂದಸ್ಸುಗಳ ಸೋಂಕಿಲ್ಲದೆ ನಾಡಿನ ಜನರ ಆಡುಭಾಷೆಯಾದ ಕನ್ನಡದಲ್ಲಿಯೇ ಸೀದಾ ಸಾದಾ ನೇರ ನುಡಿಗಳಲ್ಲಿ ರಚಿತ ವಾದವುಗಳು ಶಿವ ಶರಣರ ವಚನಗಳು. ಈ ವಚನಗಳು ಕೇವಲ ದೇವರು, ದಿಂಡಿರುಗಳ ಬಗ್ಗೆ ಮಾತ್ರ ಸೀಮಿತವಾಗದೆ, ಜನಸಾಮಾನ್ಯರ ಜೀವನದಲ್ಲಿ ಹಾಸು ಹೊಕ್ಕಾಗಿರುವ ಸೂಕ್ಷ್ಮ ಸಮಸ್ಯೆಗಳ ಎಳೆಗಳನ್ನು ವಚನಕಾರರ ವಚನಗಳುಮಾರ್ಮಿಕವಾಗಿ ತಿಳಿಸಿವೆ.

ವಚನ ಸಾಹಿತ್ಯಕ್ಕೆ ಸ್ವಾಗತ
​ಅಕ್ಕ ಮಹಾದೇವಿ

ಅಕ್ಕಮಹಾದೇವಿ

ಅಂಕಿತ ನಾಮ: ಚೆನ್ನಮಲ್ಲಿಕಾರ್ಜುನ 

ಕಾಲ: ಹನ್ನೆರಡನೆಯ ಶತಮಾನ 

ದೊರಕಿರುವ ವಚನಗಳು: 434 (ಆಧಾರ: ಸಮಗ್ರ ವಚನ ಸಂಪುಟ) 

ತಂದೆ/ತಾಯಿ: ನಿರ್ಮಲಶೆಟ್ಟಿ ಮತ್ತು ಸುಮತಿ 

ಹುಟ್ಟಿದ ಸ್ಥಳ: 

ಪರಿಚಯ: ಹನ್ನೆರಡನೆಯ ಶತಮಾನದಲ್ಲಿದ್ದ ಅಕ್ಕಮಹಾದೇವಿ, ನಿರ್ಮಲಶೆಟ್ಟಿ ಮತ್ತು ಸುಮತಿಯರ ಮಗಳು. ತಂದೆ ತಾಯಿಯರ ಹೆಸರು ಕವಿ ಕಲ್ಪನೆ ಇದ್ದೀತು ಅನ್ನುವುದು ಕೆಲವು ವಿದ್ವಾಂಸರ ಅನುಮಾನ. ಹರಿಹರನ ಮಹದೇವಿಯಕ್ಕಗಳ ರಗಳೆಯ ಪ್ರಕಾರ ಊರಿನ ಮುಖ್ಯಸ್ಥ ಕೌಶಿಕ ಮಹದೇವಿಯನ್ನು ಮದುವೆಯಾಗಲು ಬಯಸಿ ಒತ್ತಾಯಿಸಿದ. ಅಕ್ಕ ಶರತ್ತುಗಳನ್ನು ವಿಧಿಸಿ ಮದುವೆಗೆ ಒಪ್ಪಿದರೂ ಕೌಶಿಕ ವಚನ ಭಂಗ ಮಾಡಿದಾಗ ಉಡುಗೆಯನ್ನೂ ತೊರೆದು ಮನೆ ಬಿಟ್ಟು ಹೊರಟುಬಿಡುತ್ತಾಳೆ. ಇನ್ನು ಕೆಲವು ಕಥನಪರಂಪರೆಗಳಲ್ಲಿ ಅಕ್ಕ ಎಳವೆಯಲ್ಲೇ ಚನ್ನಮಲ್ಲಿಕಾರ್ಜುನನನ್ನು ವರಿಸಿದವಳು ಅನ್ನುವುದೂ ಉಂಟು. ಉರಕ್ಕೆ ಜವ್ವನಗಳು ಬಾರದ ಮುನ್ನ ಎಂದು ಆರಂಭವಾಗುವ ಅಕ್ಕನ ವಚನ ನೋಡಿ. ಪರ್ಯಟನೆ ಮಾಡುತ್ತ ಮಹದೇವಿ ಕಲ್ಯಾಣಕ್ಕೆ ಹೋದಳು, ಅಲ್ಲಿಂದ ಶ್ರೀಶೈಲದ ಕದಳಿಯಲ್ಲಿ ಐಕ್ಯಳಾದಳು ಎಂಬ ವಿವರಗಳಿವೆ. ಅಲ್ಲಮ ಮತ್ತು ಅಕ್ಕಮಹಾದೇವಿ ಒಂದೇ ಪ್ರಾಂತದವರು, ಅವರ ಬದುಕಿನ ಕಥೆಗಳಲ್ಲೂ ವೈಚಾರಿಕ ನಿಲುವುಗಳಲ್ಲೂ ಅನೇಕ ಸಾಮ್ಯಗಳಿವೆ. ಈಕೆಯ 434 ವಚನಗಳು ಮತ್ತು ಹಲವು ಹಾಡುಗಳು ದೊರೆತಿವೆ. ಯೋಗಾಂಗ ತ್ರಿವಿಧಿ, ಸೃಷ್ಟಿಯ ವಚನ ಮತ್ತು ಮಂತ್ರಗೋಪ್ಯ ಮಹಾದೇವಿಯ ಇತರ ಕೃತಿಗಳು ಎಂದು ಹೇಳುವುದುಂಟು. ಆದರೆ ಇವುಗಳ ರಚನೆಯನ್ನು ನೋಡಿದರೆ ವಚನಗಳನ್ನು ಸೃಷ್ಟಿಸಿದ ಮನಸ್ಸೇ ಈ ಕೃತಿಗಳನ್ನೂ ರಚಿಸಿತು ಎಂದು ನಂಬುವುದು ಕಷ್ಟವಾಗುವಂತಿದೆ. ಭಾವಗಳ ತೀವ್ರತೆ ಈಕೆಯ ರಚನೆಗಳ ಮುಖ್ಯ ಲಕ್ಷಣ.

​ಅಲ್ಲಮಪ್ರಭುದೇವರು

ಅಲ್ಲಮಪ್ರಭುದೇವರು

ಅಂಕಿತ ನಾಮ: ಗುಹೇಶ್ವರ 

ಕಾಲ: 1160 

ದೊರಕಿರುವ ವಚನಗಳು: 1670 (ಆಧಾರ: ಸಮಗ್ರ ವಚನ ಸಂಪುಟ) 

ತಂದೆ/ತಾಯಿ: ನಾಗವಾಸಾಧಿಪತಿ 

ಹುಟ್ಟಿದ ಸ್ಥಳ: ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ 

ಪರಿಚಯ: ಕಾಲ, ಸು. 1160. ಊರು: ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ. ಇವನ ಬದುಕನ್ನು ಕುರಿತು ಹರಿಹರ ಮತ್ತು ಚಾಮರಸ ಎರಡು ಬೇರೆ ಬೇರೆಯ ರೀತಿಯ ಕಥೆಗಳನ್ನು ಹೇಳಿದ್ದಾರೆ. ಅಲ್ಲಮನ ತಂದೆ ನಿರಹಂಕಾರ, ತಾಯಿ ಸುಜ್ಞಾನಿ, ಗುರು ಅನಿಮಿಷ. ಇವು ಕಲ್ಪಿತವಾದ ಹೆಸರುಗಳಾಂತೆ ತೋರುತ್ತವೆ. ತಂದೆ ‘ನಾಗವಾಸಾಧಿಪತಿ’. ಅಲ್ಲಮ ದೇವಸ್ಥಾನದಲ್ಲಿ ಮದ್ದಳೆಯನ್ನು ನುಡಿಸುತ್ತಿದ್ದ. ಅವನನ್ನು ಕಾಮಲತೆ ಎಂಬ ಹೆಣ್ಣು ಮೆಚ್ಚಿ ಮದುವೆಯಾದಳು. ಅವಳು ಜ್ವರಬಾಧೆಯಿಂದ ತೀರಿಕೊಂಡಳು. ತಾನೂ ಸಾಯಲು ಬಯಸಿದ ಅಲ್ಲಮ ಗುಹೆಯನ್ನು ಪ್ರವೇಶಿಸಿದಾಗ ಅಲ್ಲಿ ಅನಿಮಿಷನ ದರ್ಶನವೂ ದೀಕ್ಷೆಯೂ ದೊರೆಯಿತು ಅನ್ನುವುದು ಹರಿಹರ ತನ್ನ ರಗಳೆಯಲ್ಲಿ ಹೇಳುವ ಕಥೆ. ಅಲ್ಲಮನು ಪರಮ ವಿರಾಗಿ. ಅವನನ್ನು ಮೆಚ್ಚಿಬಂದ ಕಾಮಲತೆಯನ್ನು ಸೋಲಿಸಿ ಗೆದ್ದ ಎಂಬುದು ಚಾಮರಸ ‘ಪ್ರಭುಲಿಂಗಲೀಲೆ’ಯಲ್ಲಿ ಹೇಳುವ ಕಥೆ. ಅಲ್ಲಮ ದೇಶಸಂಚಾರಿಯಾಗಿ ಅನೇಕ ಸಾಧಕರನ್ನು ಭೇಟಿಯಾಗಿ, ಅವರೊಡನೆ ಸಂವಾದ ನಡೆಸಿ ಮಾರ್ಗದರ್ಶನ ಮಾಡುತ್ತ ಕಲ್ಯಾಣಕ್ಕೆ ಬಂದು ಅಲ್ಲಿನ ಅನುಭವ ಮಂಟಪದ ಮುಖ್ಯಸ್ಥನಾಗಿ, ನಂತರ ಶ್ರೀಶೈಲಕ್ಕೆ ತೆರಳಿ ಮತ್ತೆ ಮರಳಿದ್ದನ್ನು ‘ಶೂನ್ಯಸಂಪಾದನೆ’ಗಳು ಹೇಳುತ್ತವೆ. ಅಲ್ಲಮನ 1670 ವಚನಗಳು ದೊರೆತಿವೆ. ಇವುಗಳಲ್ಲಿ ಹನ್ನೆರಡನೆಯ ಶತಮಾನದ ವೈಚಾರಿಕ ವಾಗ್ವಾದದ ಚರಿತ್ರೆಯನ್ನು ಕಾಣಬಹುದೆಂದು ಸಂಸ್ಕೃತಿ ಚಿಂತಕರು ಭಾವಿಸುತ್ತಾರೆ. ಅಲ್ಲಮನನ್ನು ಕುರಿತ ದೊಡ್ಡಾಟ, ಬಯಲಾಟಗಳಿವೆ. ಅಲ್ಲಮನ ಸಮಾಧಿಸ್ಥಳವೆಂದು ಗುರುತಿಸುವ ಇಪ್ಪತ್ತಕ್ಕೂ ಹೆಚ್ಚು ಸ್ಥಳಗಳು 

ಚನ್ನಬಸವಣ್ಣ

ಚನ್ನಬಸವಣ್ಣನವರ ವ್ಯಕ್ತತ್ವದ ಬಗೆಗೆ ಷಟಸಥಲಸಿದ್ಧಾಂತ ಮತ್ತು ಆಚರಣೆಯ ನಿರ್ಣಯದಲ್ಲಿ ಚನ್ನಬಸವಣ್ಣನವರು ವಹಿಸಿದ ಮಹತ್ವಪೂರ್ಣ ಪಾತ್ರವನ್ನು ತಿಳಿಯಲು ಸಾಕಷ್ಟು ಸಾಮಗ್ರಿ ನಮಗೆ ದೊರೆಯುತ್ತದೆ. ಆದರೆ ಅವರ ಜೀವನಚರಿತ್ರೆಯ ಬಗ್ಗೆ ಅವರನ್ನೇ ಕುರಿತು ಬರೆದ ವಿರೂಪಾಕ್ಷಪಂಡಿತನ ಚೆನ್ನಬಸವ ಪುರಾಣ ಮತ್ತು ಬೇರೆ ಕೆಲವು ಕೃತಿಗಳಲ್ಲಿ ಸಾಂದರ್ಭಿಕವಾಗಿ ಕೆಲವು ವಿವರಗಳು ದೊರೆಯುತ್ತಿವೆಯಾದರೂ ಒಂದೆರಡು ವಿಷಯಗಳ ಬಗೆಗೆ ಎಲ್ಲವುಗಳಲ್ಲಿಯೂ ಏಕಾಭಿಪ್ರಾಯವಿಲ್ಲ. ಉಪಲಬ್ದ ಸಾಮಗ್ರಿಯನ್ನೇ ಆಧರಿಸಿ ಚನ್ನಬಸವಣ್ಣನವರ ಜೀನವ ಚರಿತ್ರೆಯನ್ನು ಈಗ ನಿರೂಪಿಸಬೇಕಾಗಿದೆ.

ಹನ್ನೆರಡನೆ ಶತಮಾನದಲ್ಲಿ ಕಲ್ಯಾಣದ ಶರಣರಲ್ಲಿ ಅಗ್ರಗಣ್ಯನಾಗಿ ಆಚಾರ್ಯ ಪುರುಷನಾಗಿ ಬೆಳಗಿದ ಚೆನ್ನಬಸವಣ್ಣನು, ಭಕ್ತಿ, ಜ್ಞಾನ ವೈರಾಗ್ಯ ಮೂರ್ತಿಯಾಗಿ ಕಂಗೊಳಿಸಿದ್ದಾನೆ. ಚೆನ್ನಬಸವಣ್ಣನು ಅವಿರಳಜ್ಞಾನಿ, ಸದಮಲಜ್ಞಾನಿ, ಷಟುಸ್ಥಲ ಸ್ಥಾಪನಾಚಾರ್ಯ, ದಿವ್ಯಗುಣ ಸಂಪನ್ನನೆಂದು ಪ್ರಸಿದ್ಧನಾಗಿದ್ದಾನೆ. ಬಸವಣ್ಣನ ಅಕ್ಕ ನಾಗಲಾಂಬಿಕೆ ಮತ್ತು ಶಿವದೇವರಿಗೆ ಪುತ್ರನಾಗಿ ಕ್ರಿ. ಶ. ೧೧೪೪ ರಲ್ಲಿ ಜನಿಸಿದ ಚೆನ್ನಬಸವಣ್ಣ ಅತಿಚಿಕ್ಕ ವಯಸ್ಸಿನಲ್ಲೇ ಅಸಾಧರಣ ಕಾರ್ಯಗಳನ್ನು ಮಾಡಿದ ಮಹಾಪುರುಷನಾಗಿದ್ದಾನೆ. ಚೆನ್ನಬಸವಣ್ಣ ಕೂಡಲ ಸಂಗಮದಲ್ಲಿ ವಿದ್ಯಾಭ್ಯಾಸ ಮಾಡಿ ಪ್ರತಿಭಾಸಂಪನ್ನನಾದನು ಕಲ್ಯಾಣಕ್ಕೆ ಬಂದ ನಂತರ ಬಸವಣ್ಣನ ಮಹಾಮನೆಯ ಕಾರ್ಯದಲ್ಲಿ ನೆರವಾಗಿ ಧರ್ಮೊದ್ಧಾರ ಕರ್ಯಗಳಲ್ಲಿ ಸಹಯಕನಾದವನು. ಅನುಭವ ಮಂಟಪದ ಎಲ್ಲಾಕಾರ್ಯಗಳು ಚೆನ್ನಬಸವಣ್ಣನವರ ನೇತ್ರತ್ವದಲ್ಲಿ ನಡೆಯುತ್ತಿದ್ದವು. ಅಲ್ಲಮ ಪ್ರಭುವಿನ ಅಪ್ಪಣೆ ಮೇರೆಗೆ ಕಲ್ಯಾಣಕ್ಕೆ ಬಂದ ಸಿದ್ಧರಾಮನಿಗೆ ಲಿಂಗಧಾರಣೆ ಮಾಡಿದ ಮಹಾಮಹಿಮಶಾಲಿ. ಈತ ಅನುಭವ ಮಂಟಪಕ್ಕೆ ಬಂದ ಅಕ್ಕಮಹಾದೇವಿಯ ದಿವ್ಯತ್ವವನ್ನು ಗ್ರಹಿಸಿ ಶಿವಯೋಗ ಶಕ್ತಿಯನ್ನು ಅರಿತ ಅವರು ಆಕೆಯನ್ನು ಹೀಗೆ ಸ್ತುತಿಸಿದ್ದಾರೆ.

ಬಸವಣ್ಣವನರ ಸೋದರಿ ಅಕ್ಕನಾಗಮ್ಮನ ಮಗ ಚೆನ್ನಬಸವಣ್ಣನೆಂಬುದರಲ್ಲಿ ಯಾರೂ ಸಂದೇಹ ವ್ಯಕ್ತಪಡಿಸಿಲ್ಲ. ಆದುದರಿಂದ ಚನ್ನಬಸವಣ್ಣ, ಬಸವಣ್ಣನವರ ಸೋದರಳಿಯನಾಗುತ್ತಾನೆ. ಚನ್ನಬಸವಣ್ಣನವರ ಜನ್ಮಸ್ಥಳ ಕಲ್ಯಾಣವೆಂದು ವಿರೂಪಾಕ್ಷ ಪಂಡಿತನ ಚೆನ್ನಬಸವ ಪುರಾಣ ಮತ್ತು ಸಂದಬರ್ಾನುಸಾರ ಚನ್ನಬಸವಣ್ಣನವರನ್ನು ಉಲ್ಲೇಖಿಸುವ ವೀರಶೈವ(ಲಿಂಗಾಯತ) ಕೃತಿಗಳು ಹೇಳುತ್ತವೆ. ಆದರೆ ಇತ್ತೀಚಿನ ಕೆಲವು ವಿದ್ವಾಂಸರು ಬಸವಣ್ಣವನರು ಕಲ್ಯಾಣಕ್ಕೆ ಬರುವ ಪೂರ್ವದಲ್ಲಿಯೇ ಚನ್ನಬಸವಣ್ಣನವರು ಜನಿಸಿರಬೇಕೆಂದು ಹೇಳುತ್ತಾರೆ. ಚನ್ನಬಸವಣ್ಣನವರ ತಂದೆಯ ಹೆಸರನ್ನು 'ಅಮಲಬಸವ ಚಾರತ್ರ್ಯ' (ಸಿಂಗಿರಾಜಪುರಾಣ) ವೊಂದನ್ನು ಬಿಟ್ಟು ಉಳಿದಾವ ಕೃತಿಗಳೂ ಹೇಳುವುದಿಲ್ಲ. ಸಿಂಗಿರಾಜ ಪುರಾಣದಲ್ಲಿ ಎರಡು ಮೂರುಕಡೆ ಅಕ್ಕನಾಗಮ್ಮನ ಪತಿ ಶಿವಸ್ವಾಮಿ ಅಥವಾ ಶಿವದೇವನೆಂದು ಬರುತ್ತದೆ.

ಪ್ರಭುದೇವರ ಅನಂತರ ಚನ್ನಬಸವಣ್ಣ ಶೂನ್ಯಸಿಂಹಾಸನವನ್ನೇರಿದನೆಂದು ಹೇಳಲಾಗುತ್ತದೆ. ಕಲ್ಯಾಣದಲ್ಲಿ ನಡೆದ ಕ್ರಾತಿಯಿಂದಾಗಿ ಶರಣ ಶರಣೆಯರೆಲ್ಲ ಬೇರೆ ಬೇರೆ ಕಡೆ ಚದುರಿಹೋಗುತ್ತಾರೆ. ಚನ್ನಬಸವಣ್ಣನವರು ಕ್ರಾಂತಿಯ ಅನಂತರ ಕೆಲವುದಿನ ಕಲ್ಯಾಣದಲ್ಲಿಯೇ ಉಳಿದು ಅಲ್ಲಿದ್ದ ಶರಣರ ಯೋಗಕ್ಷೇಮವನ್ನು ನೋಡಿಕೊಂಡಿರುವ ಸಾಧ್ಯತೆ ಇದೆ. ಆಮೇಲೆ ಪರಿಸ್ಥಿತಿ ಇನ್ನೂ ಉಲ್ಬಣಗೊಂಡಾಗ ಉಳಿದ ಶರಣರ ಜೊತೆಯಲ್ಲಿ ಅವರು ಉಳವಿಯತ್ತ ಪ್ರಯಾಣ ಬೆಳೆಸಿದಂತೆ ಕೆಲವು ಕೃತಿಗಳಿಂದ ತಿಳಿದುಬರುತ್ತದೆ. ಚನ್ನಬಸವಣ್ಣನವರು ಬಯಲಾದುದು ಉಳವಿಯಲ್ಲಿಯೇ ಎಂಬ ನಂಬಿಕೆ ಈಗಲೂ ಅನೇಕ ಜನರಲ್ಲಿ ಬಲವತ್ತರವಾಗಿದೆ.

​ವಚನ ಸಾಹಿತ್ಯ ಇಡಿ ಪ್ರಪಂಚಕ್ಕೆ ಹರಡಲು ನಿಮ್ಮ ಸಹಾಯ ತುಂಬಾ ಮುಖ್ಯ ವಾಗಿದೆ.

ನನ್ನ ವೆಬ್ ಸೈಟ್ ಗೆ  ಸ್ವಾಗತ

ನಮ್ಮ ಬಗ್ಗೆ

I'm a paragraph. Click here to add your own text and edit me. I’m a great place for you to tell a story and let your users know a little more about you.

ವಿಳಾಸ

123-456-7890

 

500 Terry Francois Street
San Francisco, CA 94158

 

info@mysite.com

ಇಮೇಲ್ ಚಂದಾದಾರರಾಗಿ
  • Grey Facebook Icon
  • Grey Google+ Icon
  • Grey Instagram Icon

© 2023 by HARMONY. Proudly created with Wix.com

bottom of page